ಬಾಗಲಕೋಟೆ : ಅನಾರೋಗ್ಯದಿಂದ ಮೃತಪಟ್ಟ ಕಾಂಗ್ರೆಸ್‌ನ ಹಿರಿಯ ಶಾಸಕ ಹೆಚ್.ವೈ.ಮೇಟಿ (79) ಅವರ ಅಂತ್ಯಕ್ರಿಯೆ ಹುಟ್ಟೂರಾದ ತಿಮ್ಮಾಪುರ ಗ್ರಾಮದ ಜಮೀನಿನಲ್ಲಿ ಇಂದು ನಡೆಯಿತು.

ಕುರುಬ ಸಮುದಾಯದ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆದಿದ್ದು, ತಂದೆ-ತಾಯಿ ಸಮಾಧಿ ಪಕ್ಕದಲ್ಲೇ ಹೆಚ್.ವೈ.ಮೇಟಿ ಅವರ ಅಂತ್ಯಕ್ರಿಯೆನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗಿದೆ. ಪೊಲೀಸರು ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವ ಸಲ್ಲಿಸಿದ್ದಾರೆ.
ಹೆಚ್.ವೈ.ಮೇಟಿ ಅವರ ಅಂತ್ಯಕ್ರಿಯೆಗೆ ಜನಸಾಗರವೇ ಹರಿದುಬಂದಿದ್ದು, ಸಿಎಂ ಸಿದ್ದರಾಮಯ್ಯ ಹೆಚ್.ವೈ.ಮೇಟಿ ಪುತ್ರರಿಗೆ ರಾಷ್ಟ್ರಧ್ವಜವನ್ನ ಹಸ್ತಾಂತರಿಸಿದ್ದಾರೆ.
ಇನ್ನು, ಹೆಚ್.ವೈ.ಮೇಟಿ ಅಂತ್ಯಕ್ರಿಯೆಯಲ್ಲಿ ಸಚಿವರಾದ ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಭೈರತಿ ಸುರೇಶ್, ಹೆಚ್.ಸಿ.ಮಹದೇವಪ್ಪ, ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಸೇರಿ ಹಲವು ರಾಜಕೀಯ ಗಣ್ಯರು ಭಾಗಿಯಾಗಿದ್ದರು.
ಇದನ್ನೂ ಓದಿ : BBK 12: ಕಣಿ ಹೇಳುವ ಮೂಲಕ ಮನದ ನೋವು ಹಂಚಿಕೊಂಡ್ರಾ ಜಾಹ್ನವಿ?



















