ಚಂದನವನದ ಹಿರಿಯ ನಟ ಡಿ. ತಿಮ್ಮಯ್ಯ ಅವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಡಿ. ತಿಮ್ಮಯ್ಯ ಅವರಿಗೆ 92 ವರ್ಷ ವಯಸ್ಸಾಗಿತ್ತು. ಇವರು ಡಾ. ರಾಜಕುಮಾರ್, ವಿಷ್ಣುವರ್ಧನ್ ಸೇರಿದಂತೆ ಕನ್ನಡದ ಹಲವು ಹಿರಿಯ ನಟರೊಂದಿಗೆ ನಟಿಸಿದ್ದಾರೆ. ಅಲ್ಲದೇ, ನಿರ್ದೇಶಕ ದೊರೈ ಭಗವಾನ್, ಸುನೀಲ್ ಕುಮಾರ್ ದೇಸಾಯಿ, ಭಾರ್ಗವ ಸೇರಿದಂತೆ ಹಲವು ನಿರ್ದೇಶಕರ ಬಳಿ ಕೆಲಸ ಮಾಡಿದ್ದಾರೆ. ಇತ್ತೀಚೆಗೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ಚೆಲಿಸುವ ಮೋಡಗಳು, ಪ್ರತಿಧ್ವನಿ, ಬಂಧನ, ಬೆಂಕಿಯ ಬಾಲೆ, ಕಾಮನ ಬಿಲ್ಲು, ಪರಮೇಶಿ ಪ್ರೇಮ ಪ್ರಸಂಗ, ಜ್ವಾಲಾಮುಖಿ, ಭಾಗ್ಯದ ಲಕ್ಷ್ಮಿ ಬಾರಮ್ಮ , ಕರ್ಣ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿದ್ದಾರೆ. ಇವರಿಗೆ ನಾಲ್ವರು ಮಕ್ಕಳಿದ್ದಾರೆ. ಇವರ ಅಂತಿಮ ಸಂಸ್ಕಾರ ಭಾನುವಾರ ಮಧ್ಯಾಹ್ನ 12 ಕ್ಕೆ ಬನಶಂಕರಿ ಚಿತಾಗಾರದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.