ಬೆಂಗಳೂರು: ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಅವರು ಹೃದಯಘಾತದಿಂದ ಇಂದು(ಶನಿವಾರ) ಬೆಳಗ್ಗೆ ನಗರದ ಬಿಎಂಟಿಸಿ ಬಸ್‌ನಲ್ಲಿ ಸಂಚಾರಿಸುವಾಗ ಸಾವನ್ನಪ್ಪಿದ್ದಾರೆ.
ಬೆಳಗಾವಿ ಅಧಿವೇಶನ ವರದಿಗೆ ತೆರಳಿದ್ದ ಹಿರಿಯ ಪತ್ರಕರ್ತ, ಅಧಿವೇಶನ ಮುಗಿದ ಹಿನ್ನಲೆ ಇಂದು ಬೆಳಗ್ಗೆ ಬೆಂಗಳೂರಿಗೆ ವಾಪಾಸ್ ಆಗಿದ್ದರು. ಮೆಜೆಸ್ಟಿಕ್‌ಗೆ ಬಂದು ಬಿಎಂಟಿಸಿ ಬಸ್ ಮೂಲಕ ಮನೆಗೆ ತೆರಳುವಾಗ ಹೃದಾಯಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು, ಸಂಜೆವಾಣಿ, ದೂರದರ್ಶನ, ಆಕಾಶವಾಣಿ ಪತ್ರಕರ್ತರಾಗಿ ಕೆಲಸ ಮಾಡಿದ್ದರು. ಪ್ರಸ್ತುತ ಕರ್ನಾಟಕ ಪತ್ರಕರ್ತ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸದ್ಯ ಉಪ್ಪಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ‘ಪ್ರಮೋಷನ್ ಪರೀಕ್ಷೆ ಕನ್ನಡದಲ್ಲೂ ನಡೆಸಿ’ | ಕರವೇ ಅಧ್ಯಕ್ಷ ನಾರಾಯಣ ಗೌಡ ಆಗ್ರಹ



















