ವಿಜಯನಗರ: ಹಿರಿಯ ಸಾಹಿತಿ, ಖ್ಯಾತ ವಿಮರ್ಶಕ, ಕತೆಗಾರ, ಚಿಂತಕ ಡಾ.ಮೊಗಳ್ಳಿ ಗಣೇಶ್ (62) ಇಂದು ಬೆಳಗ್ಗೆ ಹೊಸಪೇಟೆಯಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಮೊಗಳ್ಳಿ ಗಣೇಶ್ ಪ್ರಸ್ತುತ ಹಂಪಿ ಕನ್ನಡ ವಿಶ್ವವಿದ್ಯಾಲಯದ ಜಾನಪದ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು. ಕೆಲವು ದಿನದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇದೀಗ ಅಂಗಾಂಗ ವೈಫಲ್ಯದಿಂದಾಗಿ ವಿಧಿವಶರಾಗಿದ್ದಾರೆ.
ಮೊಗಳ್ಳಿ ಗಣೇಶ್ ಅವರ ಅಂತ್ಯಕ್ರಿಯೆ ಇಂದು ಭಾನುವಾರ ಸಂಜೆ 4 ಗಂಟೆ ಮದ್ದೂರಿನ ನಿಡಘಟ್ಟದ ಬಳಿ ಇರುವ ಅವರ ಸ್ವಂತ ಊರು ಸಂತೆಮೊಗೇನ ಹಳ್ಳಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.