ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದ್ದು, ಇನ್ನೂ ಎರಡು ದಿನ ಇದೇ ರೀತಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟೋ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡು ಜಿಲ್ಲೆಗಳ ಕೆಲವೆಡೆ ಮಧ್ಯಮ ಮಳೆ ಮತ್ತು ನಿರಂತರ ಮಳೆಯಾಗಲಿದೆ. 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.