ಬೆಂಗಳೂರು: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು ಎಂಬ ಆ ಭಾಗದ ಜನರ ಬೇಡಿಕೆಗೆ ಪೂರಕವಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.
ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳು ಈ ಸಚಿವಾಲಯದ ವ್ಯಾಪ್ತಿಗೆ ಬರಲಿವೆ. ಇದರ ಕೇಂದ್ರ ಕಚೇರಿ ಎಲ್ಲಿರಬೇಕು? ಮತ್ತಿತ್ತರ ಅಂಶಗಳನ್ನು ಮುಂದಿನ ದಿನಗಳಲ್ಲಿ ತೀರ್ಮಾನಿಸಲಾಗುವುದು ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.