ಬೆಂಗಳೂರು: ನೈಸ್ ರಸ್ತೆ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ನಿಂತಿದ್ದ ಲಾರಿಗೆ (Lorry) ಹಿಂಬದಿಯಿಂದ ಮಿನಿ ಬಸ್ (Mini Bus) ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಪರಿಣಾಮ ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಿಗ್ಗೆ 9ಗಂಟೆಯ ಸುಮಾರಿಗೆ ಎಲೆಕ್ಟ್ರಾನಿಕ್ ಸಿಟಿ (Electronic City) ಈ ಅಪಘಾತ ಸಂಭಿವಿಸಿದೆ. ನಿಂತಿದ್ದ ಲಾರಿಗೆ ಮಿನಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಹಿಂದೆ ಬರುತ್ತಿದ್ದ ಎರಡು ಕಾರುಗಳು ಕೂಡ ಡಿಕ್ಕಿಯಾಗಿ ಸರಣಿ ಅಪಘಾತ ಉಂಟಾಗುವಂತಾಗಿದೆ.
ಘಟನೆಯಲ್ಲಿ ಬಸ್‌ನಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಎಲೆಕ್ಟ್ರಾನಿಕ್ ಸಿಟಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.