ಬೆಂಗಳೂರು: ಬೆಂಗಳೂರಿನಲ್ಲಿ ಸ್ಯಾಂಡಲ್‌ವುಡ್ ನಟ ಮಯೂರ್ ಪಟೇಲ್ ಕುಡಿದ ಮತ್ತಿನಲ್ಲಿ ಸಿಗ್ನಲ್‌ನಲ್ಲಿ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆಸಿ ಸರಣಿ ಅಪಘಾತ ಎಸಗಿರುವ ಘಟನೆ ಓಲ್ಡ್ ಏರ್ಪೋರ್ಟ್ ರಸ್ತೆಯ ಕಮಾಂಡೊ ಆಸ್ಪತ್ರೆ ಸಿಗ್ನಲ್ ಬಳಿ ಕಳೆದ ರಾತ್ರಿ ಹತ್ತು ಗಂಟೆ ಸುಮಾರಿಗೆ ನಡೆದಿದೆ.
ನಟ ಮಯೂರ್ ಪಟೇಲ್ ಕುಡಿದ ಮತ್ತಿನಲ್ಲಿ ರಾತ್ರಿ ತನ್ನ ಫಾರ್ಚೂನರ್ ಕಾರು ಚಲಾಯಿಸಿದ್ದು, ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಬೆಂಗಳೂರಿನ ದಮ್ಮಲೂರಿನ ಸಿಗ್ನಲ್ ಬಳಿ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ ರಭಸಕ್ಕೆ ಮೂರು ಕಾರುಗಳು ಜಖಂ ಆಗಿದ್ದು, ಈ ವೇಳೆ ಕಂಟ್ರೋಲ್ ರೂಮ್‌ಗೆ ಚಾಲಕರು ಕರೆ ಮಾಡಿದ್ದಾರೆ.
ಬಳಿಕ ಪೊಲೀಸರು ನಟ ಮಯೂರ್ ಪಟೇಲ್‌ರನ್ನು ಠಾಣೆಗೆ ಕರೆದೊಯ್ದಿದ್ದಾರೆ. ಕಾರು ಮಾಲೀಕ ಶ್ರೀನಿವಾಸ್ ಎಂಬವರು ಈ ಬಗ್ಗೆ ದೂರು ನೀಡಿದ್ದು, ನಟ ಮಯೂರ್ ಪಟೇಲ್ ವಿರುದ್ಧ ಹಲಸೂರು ಸಂಚಾರಿ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಸಂಚಾರ ಪೊಲೀಸರು ನಟ ಮಯೂರ್ ಪಟೇಲ್ ಅವರನ್ನು ವಶಕ್ಕೆ ಪಡೆದು ‘ಡ್ರಿಂಕ್ ಆಂಡ್ ಡ್ರೈವ್’ (DD) ತಪಾಸಣೆ ನಡೆಸಿದಾಗ ನಟ ಮದ್ಯಪಾನ ಮಾಡಿರುವುದು ದೃಢಪಟ್ಟಿದೆ. ಅಚ್ಚರಿಯ ವಿಷಯವೆಂದರೆ, ಅಪಘಾತ ಎಸಗಿದ ನಟನ ಕಾರಿನ ಇನ್ಸೂರೆನ್ಸ್ (ವಿಮೆ) ಕೂಡ ಲ್ಯಾಪ್ಸ್ ಆಗಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಸದ್ಯ ಪೊಲೀಸರು ಪಾರ್ಚೂನರ್ ಕಾರನ್ನು ಸೀಜ್ ಮಾಡಿದ್ದು, ಹಲಸೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: ಮೊದಲ ಲುಕ್ಷುರಿ ಕಾರು ಖರೀದಿಸಿ ಭಾವುಕರಾದ ‘ಬಿಗ್‌ಬಾಸ್’ ಖ್ಯಾತಿಯ ಶ್ರುತಿ ಪ್ರಕಾಶ್.. ಬೆಲೆ ಎಷ್ಟು ಗೊತ್ತಾ?



















