ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣ ರಾಜ್ಯದಲ್ಲಿ ದೊಡ್ಡ ಆತಂಕ ಸೃಷ್ಟಿಸುತ್ತಿದೆ. ಈ ವಿಷಯವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ತನಿಖೆಗೆ ಆದೇಶಿಸಿದೆ. ಈ ಬೆನ್ನಲ್ಲೇ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.
ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ಕೂಡ ನಡೆಸಿದ್ದರು. ಹೀಗಾಗಿ ಆರು ಮಹಿಳೆಯರ ಸಾವಿನ ಬಗ್ಗೆ ತನಿಖೆಗೆ ಲೋಕಾಯುಕ್ತ ನ್ಯಾಯಮೂರ್ತಿ ನ್ಯಾ. ಬಿ.ಎಸ್ ಪಾಟೀಲ್ ಆದೇಶ ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಔಷಧ ನಿಯಂತ್ರಕ, ರಾಜ್ಯ ವೈದ್ಯಕೀಯ ಸರಬರಾಜು ನಿಯಮಿತ ವ್ಯವಸ್ಥಾಪಕ ನಿರ್ದೇಶಕ, ಬಳ್ಳಾರಿ ಸರ್ಕಾರಿ ಆಸ್ಪತ್ರೆ ಹಿರಿಯ ಅಧಿಕಾರಿಗಳು, ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಆರೋಗ್ಯಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಸೂಚಿಸಲಾಗಿದೆ.
ಅಲ್ಲದೇ, ನಿನ್ನೆಯಷ್ಟೇ ಬಿಜೆಪಿಯ ನಿಯೋಗ ಈ ಪ್ರಕರಣಕ್ಕೆ ಸಂಬಂದಿಸಿದಂತೆ ದೂರು ದಾಖಲಿಸಿತ್ತು. ಆನಂತರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದರು. ಈಗ ತನಿಖೆ ನಡೆಸುತ್ತಿದೆ.