ಹಾಸನದಲ್ಲಿ ಸರಣಿ ಹೃದಯಾಘಾತ ಹಿನ್ನಲೆಯಲ್ಲಿ ಸ್ಥಳೀಯರಿಗೆ ಆತಂಕ ಹೆಚ್ಚಾಗಿದೆ.
ಪ್ರತಿದಿನ ಹೃದಯಾಘಾತಕ್ಕೆ ಪ್ರಾಣಬಿಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಈಗ ಆಸ್ಪತ್ರೆಗೆ ದೌಡಾಯಿಸುತ್ತಿದ್ದಾರೆ.
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಹೊರ ರೋಗಿಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ನಿತ್ಯ 500ರಿಂದ 600 ಮಂದಿ ರೋಗಿಗಳು ಇರುತ್ತಿದ್ದ ಆಸ್ಪತ್ರೆಯಲ್ಲಿ ಈಗ ಸಾವಿರದ ಗಡಿ ದಾಟಿದೆ. ಹೃದಯ ತಪಾಸಣೆಗೆ ಹೆಚ್ಚಿನ ಜನರು ಬರುತ್ತಿದ್ದು, ಹೃದಯ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಹೀಗೆ ಬರುತ್ತಿರುವವರ ಪೈಕಿ ಹಾಸನ ಜಿಲ್ಲೆಯವರೇ ಹೆಚ್ಚಾಗಿದ್ದಾರೆ ಅಂತಾ ಆಸ್ಪತ್ರೆ ವೈದ್ಯ ಸದಾನಂದ್ ಸ್ಪಷ್ಟಪಡಿಸಿದ್ದಾರೆ.