ಬೆಂಗಳೂರು: ಸಿರಿಯಲ್ ಸೆಟ್ ಹಾಗೂ ಶಾಮಿಯಾನ ಅಂಗಡಿಗೆ ನುಗ್ಗಿ ಕಳ್ಳತನ ನಡೆಸಿದ ಘಟನೆ ಬೆಂಗಳೂರಿನ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವಿದ್ಯಾಪೀಠ ಸಮೀಪ ಇರುವ ಕುಮಾರ್ ಎಂಬುವರಿಗೆ ಸೇರಿದ ಸಿರಿಯಲ್ ಸೆಟ್ ಅಂಡ್ ಶಾಮಿಯಾನ ಅಂಗಡಿಯನ್ನು ಗುರಿಯಾಗಿಸಿಕೊಂಡ ದುಷ್ಕರ್ಮಿಗಳು, ಶನಿವಾರ ತಡರಾತ್ರಿ ಕಳ್ಳತನ ನಡೆಸಿದ್ದಾರೆ. ನಂಬರ್ ಪ್ಲೇಟ್ ಇಲ್ಲದ ಸ್ಕೂಟರ್‌ನಲ್ಲಿ ಬಂದ ಕಳ್ಳರು, ಮದ್ಯರಾತ್ರಿ ಸುಮಾರು 2 ಗಂಟೆ ಸಮಯದಲ್ಲಿ ಅಂಗಡಿಗೆ ನುಗ್ಗಿದ್ದಾರೆ.
ಕ್ಷಣಾರ್ಧದಲ್ಲೇ ಕೃತ್ಯ ಎಸಗಿದ ಆರೋಪಿಗಳು, ಒಂದು ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಆ್ಯಂಪ್ಲಿಫಯರ್, ಲೈಟಿಂಗ್ ಉಪಕರಣಗಳು ಹಾಗೂ ಕೇಬಲ್‌ಗಳನ್ನು ಕದ್ದೊಯ್ದಿದ್ದಾರೆ. ಕಳ್ಳತನದ ನಂತರ ಸ್ಕೂಟರ್‌ನಲ್ಲೇ ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆಯ ಬಗ್ಗೆ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಂಗಡಿಯಲ್ಲಿ ಅಳವಡಿಸಿರುವ ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಇದನ್ನೂ ಓದಿ : 120 ಗ್ರಾಂ ಚಿನ್ನ ಕಳ್ಳತನ ಕೇಸ್ | 11 ವರ್ಷದ ಬಾಲಕನ ಮೇಲೆ ಹಲ್ಲೆ ಆರೋಪ ; ಪೊಲೀಸರ ವಿರುದ್ಧ ಕುಟುಂಬಸ್ಥರು ಗರಂ



















