ಮಂಡ್ಯ : ಕಾಲೇಜಿನ ಎಚ್ ಓಡಿಯೊಬ್ಬರು ವಿದ್ಯಾರ್ಥಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂಬ ಆರೋಪವೊಂದು ಕೇಳಿ ಬಂದಿದೆ.
ಈ ಘಟನೆ ಮಂಡ್ಯ ಮಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಎಚ್ ಓಡಿ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೆಡಿಕಲ್ ಕಾಲೇಜಿನ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು, ಎಚ್ ಓಡಿ ಕೀರ್ತಿ ಎಂಬುವವರ ವಿರುದ್ಧ ಆರೋಪ ಮಾಡಿದ್ದಾರೆ.
ವಿದ್ಯಾರ್ಥಿಗಳಿಗೆ ಜಾತಿ ನಿಂದನೆ, ಅವಾಚ್ಯ ಶಬ್ದ ಬಳಕೆ, ಹಲ್ಲೆ ಮಾಡಿದ್ದಾಗಿ ಆರೋಪ ಮಾಡಿದ್ದಾರೆ. ಈ ಕುರಿತು ಮಿಮ್ಸ್ ನಿರ್ದೇಶಕರಿಗೆ ವಿದ್ಯಾರ್ಥಿಗಳು ದೂರು ನೀಡಿದ್ದಾರೆ. ವಿದ್ಯಾರ್ಥಿಗಳ ಜೊತೆ ವರ್ತನೆ ಖಂಡಿಸಿ ದೂರು ಸಲ್ಲಿಕೆ ಮಾಡಿದ್ದಾರೆ. ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಪೂರ್ವ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮಿಮ್ಸ್ ನಿರ್ದೇಶಕ ನರಸಿಂಹಸ್ವಾಮಿ ಹೇಳಿದ್ದಾರೆ.