ಬೆಂಗಳೂರು ಗ್ರಾಮಾಂತರ: ಪಟ್ಟಣ ಪಂಚಾಯತಿ ಸಿಬ್ಬಂದಿಯೊಬ್ಬ ವ್ಯಕ್ತಿಯೋರ್ವನಿಗೆ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರದ ಮಾರುತಿನಗರದಲ್ಲಿ ನಡೆದಿದೆ.
ಫರ್ದಿನ್ ಬೇಗ್ ಹಲ್ಲೆಗೆ ಒಳಗಾದ ವ್ಯಕ್ತಿ. ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಸಿಬ್ಬಂದಿ ಉಮಾಶಂಕರ್ ಮತ್ತು ಬಿಜೆಪಿ ಕಾರ್ಯಕರ್ತ ಆನಂದ್ ಮತ್ತು ಸಹಚರರಿಂದ ಹಲ್ಲೆ ಮಾಡಲಾಗಿದೆ. ಹಲ್ಲೆ ಮಾಡಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಟಿಂಗ್‌ಗೆ ತೆರಳಿದ್ದ ವೇಳೆ ಮಾತಿಗೆ ಮಾತು ಬೆಳೆದು ಸಲೂಲಿನಲ್ಲಿದ್ದ ಚಾಕುವಿನಿಂದ ವ್ಯಕ್ತಿಯ ಹೊಟ್ಟೆ ಹಾಗೂ ಎದೆಯ ಭಾಗಕ್ಕೆ ಹಲ್ಲೆ ಮಾಡಿರುವುದರಿಂದ ಗಂಭೀರ ಗಾಯವಾಗಿದ್ದು, ದೊಡ್ಡಬಳ್ಳಾಪುರ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸದ್ಯ ಈ ಘಟನಾ ಸಂಬಂಧ ಹಲ್ಲೆಗೆ ಒಳಗಾದ ಫರ್ದಿನ್, ತಂದೆ ದೊಡ್ಡಬಳ್ಳಾಪುರ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ : ಬೆಳಗಾವಿಯ ಹೋಟೆಲ್‌ನಲ್ಲಿ ಭಾರೀ ಅಗ್ನಿ ಅವಘಡ!



















