ಬೆಳಗಾವಿ: ಕುಂದಾನಗರಿಯಲ್ಲಿ ಎರಡನೇ ದಿನಕ್ಕೆ ಕಾಲಿಟ್ಟ ಅಧಿವೇಶನದಲ್ಲಿ ಸರ್ಕಾರಕ್ಕೆ ಚಳಿ ಬಿಡಿಸಲು ವಿಪಕ್ಷಗಳ ತಂತ್ರ ಹೂಡಿದ್ದು, ಇಂದು ಸರ್ಕಾರದ ವಿರುದ್ದ ವಿಪಕ್ಷಗಳು ದೊಡ್ಡ ಮಟ್ಟದ ಪ್ರತಿಭಟನೆ ಮಾಡಲು ಮುಂದಾಗಿವೆ.
ಮೆಕ್ಕೆಜೋಳ ಹಾಗೂ ಕಬ್ಬು ಬೆಳೆಗಾರರಿಗೆ ಸರ್ಕಾರದಿಂದ ಸಿಗದ ಬೆಂಬಲವನ್ನೇ ಅಸ್ತ್ರ ಮಾಡಿಕೊಂಡ ವಿಪಕ್ಷಗಳು ರಾಜ್ಯ ಸರ್ಕಾರ ದೇಶದ ಬೆನ್ನೆಲುಬು ಆಗಿರುವ ರೈತರ ವಿಚಾರದಲ್ಲಿ ಸಂಪೂರ್ಣವಾಗಿ ನಿರ್ಲಕ್ಷ್ಯಿಸಿದೆ. ಹಾಗಾಗೀ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಇಂದು ಬೆಳಿಗ್ಗೆ 10 ಗಂಟೆಗೆ ಮಾಲಿನಿ ಸಿಟಿ ಮೈದಾನದಲ್ಲಿ ವಿಪಕ್ಷಗಳು ಪ್ರತಿಭಟನೆ ನಡೆಸಲಿದ್ದಾರೆ.
ಪ್ರತಿಭಟನೆಯ ನಂತರ ಬಿಜೆಪಿ ನಾಯಕರು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಿದ್ದು, ಈ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್, ಮೇಲ್ಮನೆ ವಿಪಕ್ಷ ನಾಯಕ ಛಲವಾದಿ, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಪಕ್ಷದ ಮುಖಂಡರು ಭಾಗಿಯಾಗಲಿದ್ದಾರೆ.
ಇದನ್ನೂ ಓದಿ: ಭಗವದ್ಗೀತೆ ಬಗ್ಗೆ ಮಾತಾಡೋ ಸಿದ್ದರಾಮಯ್ಯ ತಾಕತ್ ಇದ್ರೆ ಕುರಾನ್ ಬಗ್ಗೆ ಮಾತಾಡ್ಲಿ | ಕೆ.ಎಸ್. ಈಶ್ವರಪ್ಪ ಕಿಡಿ



















