ಕಲಬುರಗಿ : ಇದೇ ನವೆಂಬರ್ 2ರಂದು ಚಿತ್ತಾಪುರದಲ್ಲಿ RSS ಪಥಸಂಚಲನ ಸಂಬಂಧ ಕೋರ್ಟ್, ವಿಚಾರಣೆಯನ್ನು ಮತ್ತೆ ಮುಂದೂಡಿದೆ. ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚನಲಕ್ಕೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಇಂದು (ಅಕ್ಟೋಬರ್ 30) ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠ, ಇನ್ನೊಂದು ಶಾಂತಿ ಸಭೆ ಮಾಡಲು ಸೂಚಿಸಿದೆ.
ನವೆಂಬರ್ 5ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಅಡ್ವೊಕೇಟ್ ಜನರಲ್ ಕಚೇರಿಯಲ್ಲಿಯೇ ಶಾಂತಿ ಸಭೆ ನಡೆಸಲು ಕೋರ್ಟ್ ಸೂಚಿಸಿ ವಿಚಾರಣೆಯನ್ನು ನವೆಂಬರ್ 7ಕ್ಕೆ ಮುಂದೂಡಿದೆ. ಹೀಗಾಗಿ ನವೆಂಬರ್ 2ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಮುಂದಾಗಿದ್ದ ಆರ್ಎಸ್ಎಸ್ಗೆ ಹಿನ್ನಡೆಯಾದಂತಾಗಿದೆ.
ನವೆಂಬರ್ 5ರಂದು ಅರ್ಜಿದಾರರು, ಅವರ ವಕೀಲರೊಂದಿಗೆ ಶಾಂತಿ ಸಭೆ ನಡೆಸಲು ಸೂಚಿಸಲಾಗಿದ್ದು, ಇಂತಹ ಘಟನೆಯಾದಾಗ ಪರಿಹಾರ ಹೇಗಿರಬೇಕೆಂಬುದಕ್ಕೆ ಇದು ಮಾರ್ಗಸೂಚಿಯಾಗಬೇಕು ಎಂದು ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರು ಸರ್ಕಾರ, ಅರ್ಜಿದಾರರಿಗೆ ತಿಳಿಸಿದ್ದಾರೆ.
ಇದನ್ನೂ ಓದಿ : ಮೈಸೂರು | ಗಂಡನನ್ನೇ ಕೊಲ್ಲಲು ಸ್ಕೆಚ್ ಹಾಕಿದ್ದ ಖತರ್ನಾಕ್ ಪತ್ನಿ : ಸಿಕ್ಕಿಬಿದ್ದಿದ್ದೇ ರೋಚಕ..!



















