ಬೆಂಗಳೂರು : ನೇಪಾಳ ಹಾಗೂ ಟಿಬೇಟ್ ಗಡಿಭಾಗದಲ್ಲಿ ಭೀಕರ ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕನ್ನಡಿಗರು ಸಿಲುಕಿರುವ ಸಾಧ್ಯತೆ ವ್ಯಕ್ತವಾಗಿದೆ. ಈ ಹಿನ್ನೆಲೆ ಸಿಲುಕಿರುವ ಕನ್ನಡಿಗರ ಮಾಹಿತಿ ಸಂಗ್ರಹಿಸಿ ಅಗತ್ಯ ನೆರವು ಒದಗಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ವಿಪತ್ತು ನಿರ್ವಹಣಾ ಇಲಾಖೆಯಿಂದ ಸಹಾಯವಾಣಿ ಆರಂಭಿಸಲಾಗಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ವ್ಯಕ್ತಿಗಳು, ಅವರ ಸಂಬಂಧಿಕರು ಹಾಗೂ ಪ್ರವಾಸ ಆಯೋಜಕರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ರಕ್ಷಣಾ ಕಾರ್ಯ, ಸ್ಥಳಾಂತರ ಹಾಗೂ ಇತರ ಅಗತ್ಯ ನೆರವಿಗಾಗಿ ಗೂಗಲ್ ಫಾರ್ಮ್ ಮೂಲಕ ಮಾಹಿತಿ ನೀಡುವಂತೆ ಸರ್ಕಾರ ಮನವಿ ಮಾಡಿದೆ.
ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ 1070 ಹಾಗೂ 080-22253707 ದೂರವಾಣಿ ಸಂಖ್ಯೆಗಳ ಮೂಲಕವೂ ಮಾಹಿತಿ ನೀಡಬಹುದಾಗಿದೆ.
ಸಿಲುಕಿರುವ ಕನ್ನಡಿಗರಿಗೆ ನೆರವು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರವು ವಿದೇಶಾಂಗ ವ್ಯವಹಾರಗಳ ಸಚಿವಾಲಯ, ನೇಪಾಳದಲ್ಲಿರುವ ಭಾರತೀಯ ರಾಯಭಾರ ಕಚೇರಿ ಹಾಗೂ ಬೀಜಿಂಗ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಮನ್ವಯ ಸಾಧಿಸಲು ಮುಂದಾಗಿದೆ.
ಇದನ್ನೂ ಓದಿ : “ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್



















