ಹಾವೇರಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯಲ್ಲಿ ಕೇಳಿ ಬಂದಿದೆ.
ಶಿಗ್ಗಾಂವಿಯ ಬಂಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಗೋಣಿರುದ್ರಾ ಶಿಗ್ಗಟ್ಟಿ (24), ಮಂಜುನಾಥ ಶಿಗ್ಗಟ್ಟಿ (23) ಲಕ್ಷ್ಮಣ ಕಬನೂರ್ ಮತ್ತು ಮಾರುತಿ ಶಿಗಟ್ಟಿ ಬಂಧಿತ ಆರೋಪಿಗಳು ಎನ್ನಲಾಗಿದೆ.
ನಾಲ್ವರಲ್ಲಿ ಮೂವರು ದೌರ್ಜನ್ಯ ಎಸಗಿದ ಆರೋಪಿ ಹಾಗೂ ಸಂತ್ರಸ್ತೆಯ ಕುಟುಂಬದ ಜೊತೆ ರಾಜಿ ಪಂಚಾಯತಿ ಮಾಡಿಸಿದ್ದರು ಎನ್ನಲಾಗಿದೆ. ಸದ್ಯ ನಾಲ್ವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.