ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಕಿರುತೆರೆ ನಟ ಚರಿತ್ ಬಾಳಪ್ಪ ಅರೆಸ್ಟ್ ಆಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರ ಠಾಣೆಯ ಪೊಲೀಸರು ಚರಿತ್ ಸೇರಿದಂತೆ ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಚರಿತ್ ಕನ್ನಡದ ‘ಮುದ್ದುಲಕ್ಷ್ಮಿ’ ಸೇರಿದಂತೆ ಹಲವು ಸೀರಿಯಲ್ ನಲ್ಲಿ ನಟಿಸಿದ್ದಾರೆ.
ಚರಿತ್ ತೆಲುಗಿನಲ್ಲೂ ಅನೇಕ ಧಾರಾವಾಹಿಗಳಲ್ಲಿ ನಟಿಸಿ ಗುರುತಿಸಿಕೊಂಡಿದ್ದಾರೆ. ತನಗೆ ಪರಿಚಯವಿದ್ದ ಗೆಳತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂಬ ಆರೋಪ ಕೇಳಿ ಬಂದಿದೆ.
ಪ್ರೀತಿಸುತ್ತೇನೆ ಅಂತ ಹೇಳಿ ದೈಹಿಕ ಸಂಪರ್ಕಕ್ಕೆ ಒತ್ತಾಯ ಮಾಡಿದ್ದಾರೆ ಎಂದು ಯುವತಿಯೊಬ್ಬರು ಆರೋಪ ಮಾಡಿದ್ದಾರೆ. ಯುವತಿ ವಾಸ ಮಾಡುತ್ತಿದ್ದ ಮನೆಗೆ ಸಹಚರರ ಜೊತೆ ನುಗ್ಗಿ ಕಿರುಕುಳ ನೀಡಿದ್ದಾರೆ. ಹಣ ನೀಡದಿದ್ದರೆ ಖಾಸಗಿ ಫೋಟೋ, ವಿಡಿಯೋ ಹರಿಬಿಡುವ ಬೆದರಿಕೆ ಹಾಕಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.
ಯುವತಿ ನೀಡಿದ ದೂರಿನ ಹಿನ್ನೆಲೆಯಲ್ಲಿಲ ಆರೋಪಿ ಚರಿತ್ ಬಾಳಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಚರಿತ್ ಗೆ ಮದುವೆಯಾಗಿದ್ದು, ವಿಚ್ಛೇದನ ಕೂಡ ಪಡೆದಿದ್ದಾರೆ. ಪತ್ನಿಯೊಂದಿಗೆ ಕೂಡ ಕಿರಿಕ್ ಮಾಡಿಕೊಂಡಿದ್ದರು.