ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ನಿತ್ಯ ಚಾಕೋಲೆಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಖಾಸಗಿ ಶಾಲೆಯೊಂದರ ವಿದ್ಯಾರ್ಥಿನಿಯೆಂದು ತಿಳಿದು ಬಂದಿದ್ದು, ಮಗು ಮತ್ತು ತಾಯಿ ಆರೋಗ್ಯವಾಗಿರುವುದಾಗಿ ಹಾಸನದ ಜಯಚಾಮರಾಜೇಂದ್ರ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಹಾಸನ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿಯ ಮೇಲೆ ಅದೇ ಶಾಲೆಯಲ್ಲಿ ವಾಹನ ಚಾಲಕನಾಗಿದ್ದ ರಂಜಿತ್ ಎಂಬಾತ 8 ತಿಂಗಳಿನಿಂದ ಲೈಂಗಿಕ ದೌರ್ಜನ್ಯವೆಸಗಿದ್ದ ಎಂಬುವುದ ತಿಳಿದು ಬಂದಿದ್ದು, ಇದೀಗಾ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ಆರೋಪಿಯನ್ನು ಚನ್ನರಾಯಪಟ್ಟಣ ನಗರಠಾಣೆಯ ಪೊಲೀಸರು ಈಗಾಗಲೇ ಬಂಧಿಸಿ, ನ್ಯಾಯಾಂಗ ಬಂಧನಕ್ಕೂ ಒಪ್ಪಿಸಿದ್ದಾರೆ. ಇನ್ನು ಬಾಲಕಿ ಮತ್ತು ಮಗುವನ್ನು ಕೆಲ ದಿನಗಳ ಕಾಲ ಆರೈಕೆ ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರಕ್ಕೆ ಶೀಘ್ರ ಒಪ್ಪಿಸಲಾಗುವುದು ಎಂದು ಪ್ರಕಟಣೆಯಲ್ಲಿ ಹಾಸನ ಡಿಹೆಚ್ಒ ಅನಿಲ್ ತಿಳಿಸಿದ್ದಾರೆ.
ಇದನ್ನೂ ಓದಿ: ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಚಿಕ್ಕಜಾಲ ಸಬ್ ಇನ್ಸ್‌ಪೆಕ್ಟರ್



















