ಬೆಂಗಳೂರು : ಸ್ಯಾಂಡಲ್‌ವುಡ್ ನಟಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ, ಎವಿಆರ್ ಗ್ರೂಪ್ ಸ್ಥಾಪಕ ಅರವಿಂದ್ ವೆಂಕಟೇಶ್ ರೆಡ್ಡಿಗೆ 46 ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಸಂತ್ರಸ್ತ ನಟಿ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಆರೋಪಿ ಅರವಿಂದ್ ರೆಡ್ಡಿ ವಿರುದ್ಧ ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಈ ಪ್ರಕರಣ ಗೋವಿಂದರಾಜನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿತ್ತು. ಬಳಿಕ ಅರವಿಂದ್ ರೆಡ್ಡಿಯನ್ನು ಬಂಧಿಸಿ ವಿಚಾರಣೆ ನಡೆಸಿದ ಪೊಲೀಸರು, 46 ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಇದೀಗ ಜಾಮೀನು ನೀಡಿದೆ.
ಆರೋಪದ ಬಗ್ಗೆ ಅರವಿಂದ್ ರೆಡ್ಡಿ ಹೇಳಿದ್ದೇನು?
ಅರವಿಂದ್ ವೆಂಕಟೇಶ್ ರೆಡ್ಡಿಯನ್ನು ಗೋವಿಂದರಾಜನಗರ ಪೊಲೀಸರು ವಿಚಾರಣೆ ನಡೆಸಿದ್ದು, ಈ ವೇಳೆ ಕೆಲವೊಂದು ಸ್ಪೋಟಕ ಮಾಹಿತಿಗಳನ್ನು ಅವರು ಬಹಿರಂಗಪಡಿಸಿದ್ದಾರೆ. ನಟಿಗಾಗಿ ನಾನು 3 ಕೋಟಿ ರೂ. ಹಣ ಖರ್ಚು ಮಾಡಿದ್ದೇನೆ. ಸೈಟ್, ಮನೆ ಕೊಡಿಸಿದ್ದೇನೆ. ದುಬಾರಿ ಕಾರನ್ನು ಗಿಫ್ಟ್ ಮಾಡಿದ್ದೇನೆ. ಆದರೆ ಅವಳು ನನ್ನ ಬಿಟ್ಟು ಬೇರೆ ವ್ಯಕ್ತಿ ಜೊತೆಗೆ ಕಾಣಿಕೊಳ್ಳುತ್ತಿದ್ದಳು. ನಾನು ಯಾವುದೇ ಕಿರುಕುಳ ನೀಡಿಲ್ಲ, ಅವಳೇ ನನಗೆ ಮೋಸ ಮಾಡಿದ್ದಾಳೆಂದು ಆರೋಪಿ ಅರವಿಂದ್ ವೆಂಕಟೇಶ್ ರೆಡ್ಡಿ ಹೇಳಿಕೊಂಡಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ : ನ.17ಕ್ಕೆ ಪ್ರಧಾನಿ ಮೋದಿಯನ್ನು ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ.. ಕಾರಣವೇನು?



















