ನವದೆಹಲಿ : ದೆಹಲಿಯಲ್ಲಿ ಸೋಮವಾರ ನಡೆದ ಸ್ಫೋಟದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರಯನ್ನು ಬೇಟೆಯಾಡುವಂತೆ ಗೃಹ ಸಚಿವ ಅಮಿತ್ ಶಾ ತನಿಖಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ಕೃತ್ಯದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರೂ ಭಾರತೀಯ ಭದ್ರತಾ ಸಂಸ್ಥೆಗಳ ಸಂಪೂರ್ಣ ಕೋಪವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ದೆಹಲಿ ಕಾರು ಸ್ಫೋಟದ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆಗಳನ್ನು ನಡೆಸಲಾಗಿದೆ. ಈ ಘಟನೆಯ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಬೇಟೆಯಾಡಲು ಅವರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಈ ಕೃತ್ಯದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರೂ ನಮ್ಮ ಸೆಕ್ಯೂರಿಟಿ ಫೋರ್ಸ್ಗಳ ಸಂಪೂರ್ಣ ಕೋಪವನ್ನು ಎದುರಿಸಬೇಕಾಗುತ್ತದೆ ಎಂದು ಸಭೆಯ ನಂತರ ಅಮಿತ್ ಶಾ ಹೇಳಿದ್ದಾರೆ.
ಯಾವುದೇ ಭಯೋತ್ಪಾದಕ ಕೃತ್ಯವನ್ನು ಭಾರತದ ವಿರುದ್ಧದ ಯುದ್ಧ ಕೃತ್ಯ ಎಂದು ಪರಿಗಣಿಸಲಾಗುವುದು ಎಂದು ಸರ್ಕಾರ ಈ ಹಿಂದೆ ಘೋಷಿಸಿದ ನಂತರ ಶಾ ನೀಡಿದ ಹೇಳಿಕೆಯು ಹೆಚ್ಚು ಮಹತ್ವದ್ದಾಗಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ದೇಶದಲ್ಲಿ ಯಾವುದೇ ಭಯೋತ್ಪಾದಕ ಕೃತ್ಯವನ್ನು ಭಾರತದ ವಿರುದ್ಧದ ಯುದ್ಧ ಕೃತ್ಯ ಎಂದು ಪರಿಗಣಿಸಲಾಗುವುದು ಮತ್ತು ಅಪರಾಧಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿತ್ತು.
ಇದನ್ನೂ ಓದಿ : ಬೆಂಗಳೂರು | ಶಾಲೆಯ ಟಾಯ್ಲೆಟ್‌ನಲ್ಲಿ ಪಟಾಕಿ ಬ್ಲಾಸ್ಟ್ – ಬಾಂಬ್ ಅಂತ ಬೆಚ್ಚಿಬಿದ್ದ ವಿದ್ಯಾರ್ಥಿಗಳು!


















