ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯು ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯ ಅಡಿಯಲ್ಲಿ ಜೂನ್ 11. 2023 ರಿಂದ ಜುಲೈ 25, 2025ರ ಅವಧಿಯಲ್ಲಿ 500 ಕೋಟಿ ಮಹಿಳೆಯರು ಪ್ರಯಾಣ ಫಲಾನುಭವಿಗಳಾಗಿರುವ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದೆ.
KSRTC, BMTC, ವಾಯುವ್ಯ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ 500 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ.
ಈ ಸಂಬಂಧಿಸಿದಂತೆ ಬಿಯಾಂಡ್ ಫ್ರೀ ರೈಡ್ಸ್ ಎಂಬ ಹೆಸರಿನಲ್ಲಿ ಸಸ್ಟೇನಬಲ್ ಮೊಬಿಲಿಟಿ ನೆಟ್ವರ್ಕ್ ಅಧ್ಯಯನ ವರದಿ ಮಾಡಿದ್ದು, ದೇಶದ 10 ನಗರಗಳಲ್ಲಿ ಮಹಿಳೆಯರಿಗೆ ನೀಡಲಾಗುತ್ತಿರುವ ಉಚಿತ ಬಸ್ ಪ್ರಯಾಣ ಬಗ್ಗೆ ಅಧ್ಯಯನ ವರದಿ ಮಾಡಿತ್ತು. ಅಧ್ಯಯನದ ವರದಿ ಪ್ರಕಾರ, ಬೆಂಗಳೂರಿನಲ್ಲಿ ಶೇ.23ರಷ್ಟು ಮತ್ತು ಹುಬ್ಬಳ್ಳಿ – ಧಾರವಾಡದಲ್ಲಿ ಶೇ.21ರಷ್ಟು ಮಹಿಳಾ ಉದ್ಯೋಗಿಗಳು ಈ ಶಕ್ತಿಯೋಜನೆಯನ್ನು ಬಳಸಿಕೊಂಡಿದ್ದಾರೆ.



















