ದಾವಣಗೆರೆ, ಡಿಸೆಂಬರ್ 14: ಪ್ರಭಾವಿ ವೀರಶೈವ ಲಿಂಗಾಯತ ಸಮಾಜದ ಮುಖಂಡ, ಹಿರಿಯ ರಾಜಕಾರಣಿ, ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. 94 ವರ್ಷದ ಶಾಮನೂರು ಶಿವಶಂಕರಪ್ಪ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕಳೆದ ಒಂದು ತಿಂಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ನಿನ್ನೆ (ಭಾನುವಾರ) ಕೊನೆಯುಸಿರೆಳೆದಿದ್ದಾರೆ.
ಶಾಮನೂರು ಅವರ ಅಗಲಿಕೆ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ. ಇಂದು ದಾವಣಗೆರೆ ನಗರ ವ್ಯಾಪ್ತಿಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.
ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಚೇತರಿಕೆ ಕಾಣಲಿ ಎಂದು ಅಭಿಮಾನಿಗಳು ಬೆಂಬಲಿಗರು ಪೂಜೆ ಸಲ್ಲಿಸಿದ್ದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ಭೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸಿದ್ದರು. ಆರಂಭದಲ್ಲಿ ಶಾಮನೂರು ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಆದರೆ, ಅಭಿಮಾನಿಗಳ ಪ್ರಾರ್ಥನೆ ಫಲಿಸಲಿಲ್ಲ. ರಾಜಕೀಯ ಧುರೀಣ ಇನ್ನಿಲ್ಲ.
ಇದನ್ನೂ ಓದಿ: ಕಳಚಿದ ಕಾಂಗ್ರೆಸ್ನ ಹಿರಿಯ ಕೊಂಡಿ | ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು



















