ಶಿವಮೊಗ್ಗ: ಶಾಮನೂರು ಶಿವಶಂಕರಪ್ಪ ಅಗಲಿಕೆ ಬಹಳ ನೋವು ತಂದಿದೆ. ಅವರ ಅಗಲಿಕೆ ಇಡೀ ಸಮಾಜಕ್ಕೆ ದೊಡ್ಡ ಆಘಾತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್,ಯಡಿಯೂರಪ್ಪ ಅವರು ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಶಾಮನೂರು ಶಿವಶಂಕರಪ್ಪ ಅವರು ಸಮಾಜಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಕೊಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
ನಾನು ಈಗ ಶಾಮನೂರು ಶಿವಶಂಕರಪ್ಪ ಅವರ ಅಂತಿಮ ದರ್ಶನ ಪಡೆಯಲು ದಾವಣಗೆರೆಗೆ ತೆರಳುತ್ತಿದ್ದೆನೆ. ಅವರ ಮತ್ತು ನನ್ನ ನಡುವೆ ಬಹಳ ವರ್ಷಗಳ ಆತ್ಮೀಯ ಸಂಬಂಧವಿದೆ. ಇತ್ತೀಚಿಗೆ ಆಸ್ಪತ್ರೆಗೆ ತೆರಳಿ ಅವರ ಆರೋಗ್ಯ ಸಹ ವಿಚಾರಿಸಿದ್ದೆ. ಎಲ್ಲಾ ಸಮಯದಲ್ಲೂ ಎಲ್ಲ ರೀತಿಯ ಸಹಕಾರ ನೀಡಿದಂತಹ ವ್ಯಕ್ತಿ ಅವರು. ಅವರ ಬಗ್ಗೆ ಹೇಳಲು ಬಹಳಷ್ಟು ವಿಷಯವಿದೆ. ಅವರ ಆತ್ಮಕ್ಕೆ ಶಾಂತಿ ಕೋರಿ ಬರುತ್ತೇನೆ. ವೀರಶೈವ ಸಮಾಜ ಸೇರಿದಂತೆ ಎಲ್ಲಾ ಸಮಾಜಕ್ಕೂ ಅವರ ಕೊಡುಗೆ ಇದೆ ಅವರು ಹಿರಿಯ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ತಂದೆಯ ಕಷ್ಟದ ದಿನಗಳನ್ನು ನೆನೆದು ಭಾವುಕರಾದ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್



















