ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಶಾರ್ದೂಲ್ ಠಾಕೂರ್ ನಾಲ್ಕು ವಿಕೆಟ್ ಪಡೆಯುವುದರ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಮೊದಲು ಬ್ಯಾಟಿಂಗ್ ಮಾಡಿದ್ದ ಹೈದರಾಬಾದ್ ತಂಡ 9 ವಿಕೆಟ್ ಕಳೆದುಕೊಂಡು 190 ರನ್ ಗಳಿಸಿತ್ತು. ಗುರಿ ಬೆನ್ನಟ್ಟಿದ ಲಕ್ನೋ 193 ರನ್ ಗಳಿಸಿ, ಐದು ವಿಕೆಟ್ ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್, ಅತ್ಯಧಿಕ 4 ವಿಕೆಟ್ ಪಡೆದು ಮಿಂಚಿದರು.
ಶಾರ್ದೂಲ್ ಆರ್ಭಟಕ್ಕೆ ಹೊಡಿಬಡಿ ಆಟಕ್ಕೆ ಹೆಸರುವಾಸಿಯಾಗಿರುವ ಹೈದರಾಬಾದ್ನ ನಾಲ್ವರು ಸ್ಫೋಟಕ ಬ್ಯಾಟ್ಸ್ ಮನ್ ಗಳನ್ನು ಪೆವಿಲಿಯನ್ ಗೆ ಕಳುಹಿಸಿದರು. ಶಾರ್ದೂಲ್ 4 ಓವರ್ ಗಳಲ್ಲಿ 34 ರನ್ ನೀಡಿ 4 ವಿಕೆಟ್ ಗಳಿಸಿ, ಹೈದರಾಬಾದ್ ತಂಡದ ಬ್ಯಾಟಿಂಗ್ ಲೈನ್ ಅಪ್ ನ್ನು ನಾಶಪಡಿಸಿದರು. ಈ ಮೂಲಕ ಆವೃತ್ತಿಯ ನಂಬರ್-1 ಬೌಲರ್ ಆಗಿ ಹೊರಹೊಮ್ಮಿದ್ದು, ಪರ್ಪಲ್ ಕ್ಯಾಪ್ ಪಡೆದಿದ್ದಾರೆ. ಆಡಿರುವ ಪಂದ್ಯಗಳಲ್ಲಿ ಶಾರ್ದೂಲ್ ಠಾಕೂರ್ ಅತಿ ಹೆಚ್ಚು ವಿಕೆಟ್ ಪಡೆದಿದ್ದಾರೆ. 2 ಪಂದ್ಯಗಳಲ್ಲಿ 6 ವಿಕೆಟ್‌ಗಳನ್ನು ಪಡೆದು ಮಿಂಚಿದ್ದಾರೆ.
ಶಾರ್ದೂಲ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಮೊದಲ ಓವರ್‌ನಲ್ಲಿ 2 ವಿಕೆಟ್ ಉರುಳಿಸಿದ್ದರು. ಹೈದರಾಬಾದ್ ವಿರುದ್ಧದ ಪವರ್‌ಪ್ಲೇನಲ್ಲಿಯೇ ಅಭಿಷೇಕ್ ಶರ್ಮಾ ಮತ್ತು ಇಶಾನ್ ಕಿಶನ್ ಅವರಂತಹ ಬ್ಯಾಟ್ಸ್‌ಮನ್‌ಗಳನ್ನು ಬಲಿ ಪಡೆದರು. ಕೊನೆಯಲ್ಲಿ ಅವರು ಮೊಹಮ್ಮದ್ ಶಮಿ ಮತ್ತು ಅಭಿನವ್ ಮನೋಹರ್ ಅವರನ್ನು ಔಟ್ ಮಾಡಿದರು. ಅಂತಿಮವಾಗಿ 4 ಓವರ್ ಗಳಲ್ಲಿ 34 ರನ್‌ಗಳಿಗೆ 4 ವಿಕೆಟ್ ಪಡೆದು ಮಿಂಚಿದರು.