ತುಮಕೂರು: ಕೇಂದ್ರ ಸಚಿವ ವಿ. ಸೋಮಣ್ಣ ಹಾಗೂ ಹಿರಿಯ ಅಧಿಕಾರಿಗಳ ಹೆಸರಿನಲ್ಲಿ ವಂಚಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಎಂಬ ಗ್ರಾಮದ ನಿವಾಸಿ ಗೋವರ್ಧನ ಬಂಧಿತ ವ್ಯಕ್ತಿ. ಈತ ಸೋಮಣ್ಣ ಹಾಗೂ ಹಿರಿಯ ಅಧಿಕಾರಿ ಶಾಲಿನಿ ರಜನೀಶ್ ಸೇರಿದಂತೆ ಹಲವರ ಹೆಸರಿನ ನಕಲಿ ಲೆಟರ್ ಹೆಡ್ ಬಳಸಿ ಹಾಗೂ ನಕಲಿ ಸಹಿ ಮಾಡಿ ವಂಚಿಸುತ್ತಿದ್ದ ಎನ್ನಲಾಗಿದೆ.
ಸಚಿವರು ಹಾಗೂ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಆದೇಶ ಪ್ರತಿ ನೀಡುತ್ತಿದ್ದ ಎನ್ನಲಾಗಿದೆ. ಹೀಗಾಗಿ ಸೋಮಣ್ಣ ಅವರ ಕಚೇರಿಯ ಆಪ್ತ ಸಹಾಯಕ ಮಹೇಶ್ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಈ ಕುರಿತು ಎನ್ ಇಪಿಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಆರೋಪಿ ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.