ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಿಷಭ್ ಶೆಟ್ಟಿ ತಮ್ಮ ರಿಷಭ್ ಶೆಟ್ಟಿ ಫಿಲಂಸ್ ಮೂಲಕ ನಿರ್ಮಾಣ ಮಾಡಿರುವ ಚಿತ್ರ “ಶಿವಮ್ಮ” ಜೂ. 14ರಂದು ತೆರೆಗೆ ಅಪ್ಪಳಿಸಲಿದೆ.
ಗ್ರಾಮೀಣ ಸೊಗಡಿನ ಈ ಚಿತ್ರ ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ವಿಶ್ವದ ಹದಿನೇಳಕ್ಕೂ ಹೆಚ್ಚಿನ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿದೆ. ಅಲ್ಲದೇ, ಹಲವಾರು ಪ್ರಶಸ್ತಿಗಳನ್ನು ಈಗಾಗಲೇ ಗೆದ್ದಿದೆ. ಇದರ ಮಧ್ಯೆ “ಶಿವಮ್ಮ” ಚಿತ್ರವನ್ನು ಜೂನ್ 14 ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲು ನಿರ್ಮಾಪಕ ರಿಷಭ್ ಶೆಟ್ಟಿ ತೀರ್ಮಾನಿಸಿದ್ದಾರೆ.
ಜೈಶಂಕರ್ “ಶಿವಮ್ಮ” ಚಿತ್ರದ ಕಥೆ ಕುರಿತಾಗಿ ಹೇಳಿದರು. ಕಥೆ ಇಷ್ಟವಾಯಿತು. ನಿರ್ಮಾಣ ಆರಂಭಿಸಿದ್ದೆವು. ಕೋವಿಡ್ ಗೂ ಮುನ್ನ ಆರಂಭವಾದ ಚಿತ್ರವಿದು. ಉತ್ತರ ಕರ್ನಾಟಕದ ಯರೇಹಂಚಿನಾಳ ನಿರ್ದೇಶಕರ ಊರು. ಈ ಚಿತ್ರದಲ್ಲಿ ನಟಿಸಿರುವ “ಶಿವಮ್ಮ” ಪಾತ್ರಧಾರಿ ಶರಣಮ್ಮ ಚಟ್ಟಿ ಊರು ಕೂಡ ಅದೆ. ಆ ಊರಿನ ಪ್ರತಿಭೆಗಳನ್ನು ಬಳಸಿಕೊಂಡು ನಿರ್ದೇಶಕರು ಈ ಸಿನಿಮಾ ಮಾಡಿದ್ದಾರೆ. ಈವರೆಗೂ ಹದಿನೇಳು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ “ಶಿವಮ್ಮ” ಪ್ರದರ್ಶನವಾಗಿ ಪ್ರಶಂಸೆ ಪಡೆದುಕೊಂಡಿದೆ ಎಂದು ರಿಷಭ್ ಹೇಳಿದ್ದಾರೆ.