ಶಿವಮೊಗ್ಗ: 14 ವರ್ಷದ ಬಾಲಕಿಯೊಬ್ಬಳು ಗರ್ಭಿಣಿಯಾಗಿ ಮಗುವಿಗೆ ಜನ್ಮ ಕೊಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. 9ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಾಲಕಿ ಹೊಟ್ಟೆ ನೋವು ಇದೆ ಎಂದು ಶಾಲೆಗೆ ರಜೆ ಹಾಕಿದ್ದಳು. ಎರಡು ದಿನದ ಬಳಿಕ ಬಾಲಕಿ ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ.
ಮಗವಿಗೆ ಜನ್ಮ ನೀಡಿದ ತಕ್ಷಣವೇ ಕುಟುಂಬಸ್ಥರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಮಗುವನ್ನು ರಕ್ಷಿಸಿ ಚಿಕಿತ್ಸೆ ನೀಡಿದ್ದಾರೆ. ವೈದ್ಯರ ಪ್ರಕಾರ 7 ತಿಂಗಳಿಗೆ ಜನ್ಮ ನೀಡಿದ್ದು ಮಗು ಒಂದೂವರೆ ಕೆಜಿ ಇದ್ದು ಯಾವುದೇ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಬಾಲಕಿ ಮಗುವಿಗೆ ಜನ್ಮ ನೀಡುತ್ತಲೇ ತಂದೆ, ತಾಯಿ ಆಘಾತಕ್ಕೊಳಗಾಗಿದ್ದಾರೆ. ತನ್ನ ಅಣ್ಣನಿಂದಲೇ ಮಗುವಿಗೆ ಜನ್ಮ ನೀಡಿರುವುದಾಗಿ ಬಾಲಕಿ ಹೇಳಿಕೆ ನೀಡಿದ್ದು, ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಮತೆ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ತಂದೆ-ತಾಯಿ ಕೂಲಿ ಕೆಲಸ ಮಾಡಿಕೊಂಡಿದ್ದು ಓರ್ವ ಪುತ್ರ, ಮೂವರು ಹೆಣ್ಣು ಮಕ್ಕಳಿದ್ದಾರೆ. ಎರಡನೇ ಪುತ್ರಿ ಮೇಲೆ ಮೊದಲ ಮಗ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.