ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆಯಲ್ಲಿ ಭಾನುವಾರ ರಾತ್ರಿ ಲಾಂಗ್ ಹಿಡಿದು ಯುವಕನೊಬ್ಬ ಸಾರ್ವಜನಿಕರ ಮೇಲೆ ದಾಳಿ ನಡೆಸಲು ಯತ್ನಿಸಿದ ಆತಂಕಕಾರಿ ಘಟನೆ ನಡೆದಿದೆ. ಪ್ರಶಾಂತ್ ಎಂಬ ಯುವಕ ರಾತ್ರಿ ಸಮಯದಲ್ಲಿ ಲಾಂಗ್‌ನ್ನು ಝಳಪಿಸುತ್ತಾ ದಾರಿಯಲ್ಲಿ ಸಿಕ್ಕವರ ಮೇಲೆ ಅಟ್ಟಹಾಸ ಮೆರೆದಿದ್ದು, ಏಕಾಏಕಿ ನಡೆದ ಈ ಘಟನೆಯಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಈ ವೇಳೆ ಹುತ್ತಳ್ಳಿ ಗ್ರಾಮದ ಸಚಿನ್ ಎಂಬ ವ್ಯಕ್ತಿಗೆ ಮುಖಕ್ಕೆ ಗಾಯವಾಗಿದ್ದು, ತಕ್ಷಣವೇ ಅವರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಘಟನೆಯ ದೃಶ್ಯಾವಳಿ ಸ್ಥಳೀಯರು ಮೊಬೈಲ್‌ಗಳಲ್ಲಿ ಸೆರೆ ಹಿಡಿದಿದ್ದು, ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜು ರೆಡ್ಡಿ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ, ಆರೋಪಿಯಾದ ಪ್ರಶಾಂತ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಮುಂದಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : ಚಿಕ್ಕಮಗಳೂರಲ್ಲಿ ಹಿಟ್ & ರನ್ | ಸಹಕಾರ ಸಂಘದ ಸಿಬ್ಬಂದಿ ಸಾವು!



















