ಶಿವಮೊಗ್ಗ : ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ವಾಜಪೇಯಿ ಬಡಾವಣೆಯ ಹಾಸ್ಟೆಲ್ ಒಂದರಲ್ಲಿ ನಡೆದಿದೆ. ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತನನ್ನು ಬಳ್ಳಾರಿ ಮೂಲದ ಗಣೇಶ್ (21) ಎಂದು ಗುರುತಿಸಲಾಗಿದೆ.
ಈತ ನಗರದ ಖಾಸಗಿ ಕಾಲೇಜೊಂದರಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ. ವಾಜಪೇಯಿ ಬಡಾವಣೆಯ ಮೆಟ್ರಿಕ್ ನಂತರದ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ. ಇಂದು (ಜ.9) ಸ್ನಾನಕ್ಕೆ ತೆರಳಿದ್ದ ವೇಳೆ ಯುವಕ ಕುಸಿದು ಬಿದ್ದಿದ್ದಾನೆ.
ಆತನನ್ನ ಹಾಸ್ಟೆಲ್ ಸಿಬ್ಬಂದಿ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಮಾರ್ಗ ಮಧ್ಯೆದಲ್ಲಿ ಗಣೇಶ್ ಮೃತಪಟ್ಟಿದ್ದಾನೆ. ಗಣೇಶ್ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ದೆಹಲಿಯಲ್ಲಿ ಹೈಡ್ರಾಮಾ | ಅಮಿತ್ ಶಾ ಕಚೇರಿ ಮುಂದೆ ಟಿಎಂಸಿ ಸಂಸದರ ಪ್ರತಿಭಟನೆ.. ನಾಯಕರು ವಶಕ್ಕೆ!



















