ಬೆಂಗಳೂರು: ನೀವು ಶಿವಮೊಗ್ಗ ಜಿಲ್ಲೆಯವರಾ? ಪಿಯುಸಿ ಪಾಸಾಗಿ ನಿಮ್ಮ ಜಿಲ್ಲೆಯಲ್ಲೇ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಶಿವಮೊಗ್ಗ ಜಿಲ್ಲೆಯಲ್ಲಿರುವ ಗ್ರಾಮ ಪಂಚಾಯಿತಿಗಳಲ್ಲಿ 14 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಶಿವಮೊಗ್ಗ ಜಿಲ್ಲಾಡಳಿತ
ಹುದ್ದೆಗಳು: 14
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜುಲೈ 8
ಉದ್ಯೋಗ ಸ್ಥಳ: ಶಿವಮೊಗ್ಗ
ಅರ್ಜಿಗಳನ್ನು ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಪಿಯುಸಿ ಪಾಸಾಗಿರಬೇಕು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18 ವರ್ಷಗಳಿಂದ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 19,201 ರೂಪಾಯಿ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ತೀರ್ಥಹಳ್ಳಿಯ ಬಾಂಡ್ಯಕುಕ್ಕೆ, ಸಾಗರದ ಕುದರೂರು, ಭದ್ರಾವತಿಯ ವೀರಾಪುರ, ಸೊರಬದ ಭಾರಂಗಿ, ಶಿಕಾರಿಪುರದ ಮುದ್ದನಹಳ್ಳಿ, ಶಿವಮೊಗ್ಗದ ಚೋರಡಿ ಸೇರಿ ಹಲವು ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ ನಡೆಯುತ್ತಿದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ shivamogga.nic.inವೆಬ್ ಸೈಟ್ ಗೆ ಭೇಟಿ ನೀಡಿ, ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಆಯಾ ಗ್ರಾಮ ಪಂಚಾಯಿತಿಗಳಿಗೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.



















