ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಈ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಶಿವಮೊಗ್ಗದ ಇಮಾಂಬಾಡಾ ಬಡಾವಣೆಯ ನಿವಾಸಿ ನೂರ್ ಅಫ್ಸಾ (25 ಮೃತ ಮಹಿಳೆ. ನ.20 ರಂದು ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದಳು. ನ.21 ರಂದು ಸಿಜೇರಿಯನ್ ಮೂಲಕ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ಆಪರೇಷನ್ ಆದ ಎರಡು ದಿನದ ಬಳಿಕ ಮಹಿಳೆಗೆ ಮಲ ವಾಂತಿಯಾಗಿತ್ತು. ಬಳಿಕ ಪುನಃ ವೈದ್ಯರು ಆಪರೇಷನ್ ಮಾಡಿದ್ದರು. ಆಪರೇಷನ್ ಬಳಿಕ ಮಹಿಳೆ ಸಾವನ್ನಪ್ಪಿದ್ದಳು. ಮೃತಳಿಗೆ 3 ವರ್ಷದ ಹೆಣ್ಣು ಮಗು ಮತ್ತು 8 ದಿನದ ಗಂಡು ಮಗುವಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಮೃತ ಮಹಿಳೆಯ ಕುಟುಂಬಸ್ಥರು ದೂರು ನೀಡಿದ್ದಾರೆ.
ಇದನ್ನೂ ಓದಿ: ಬೆಂಗಳೂರು | ಪಿಜಿಯಲ್ಲಿ ನೇಣಿಗೆ ಶರಣಾದ ಕಾಲೇಜು ವಿದ್ಯಾರ್ಥಿನಿ



















