ಬೆಂಗಳೂರು: ನೀವು ಶಿವಮೊಗ್ಗ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನಿಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಖಾಲಿ (Shivamogga Municipal Coorporation Recruitment 2026) ಇರುವ 45 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 45 ಪೌರ ಕಾರ್ಮಿಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಶಿವಮೊಗ್ಗ ಮಹಾನಗರ ಪಾಲಿಕೆ
ಹುದ್ದೆ ಹೆಸರು: ಪೌರ ಕಾರ್ಮಿಕರು
ಒಟ್ಟು ಹುದ್ದೆ: 45
ಉದ್ಯೋಗ ಸ್ಥಳ: ತುಮಕೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 7
ಕನ್ನಡ ಮಾತನಾಡಲು ಬರುವವರು ಹಾಗೂ 55 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಲು ಅರ್ಹರು ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 27,000 – 46,675 ರೂಪಾಯಿ ಸಂಬಳ ನೀಡಲಾಗುತ್ತದೆ.ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ shivamoggacitycorp.org ಗೆ ಭೇಟಿ ನೀಡಬೇಕು.
ಪೌರ ಕಾರ್ಮಿಕ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು
ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಆಯುಕ್ತರು, ಮಹಾನಗರ ಪಾಲಿಕೆ ಕಚೇರಿ, ಗಾಂಧಿ ಪಾರ್ಕ್ ಎದುರು, ಶಿವಮೊಗ್ಗ-577201.
ಇದನ್ನೂ ಓದಿ :ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ ಭರ್ಜರಿ 3,548 ಹುದ್ದೆಗಳ ನೇಮಕಾತಿ



















