ಶಿವಮೊಗ್ಗ : ಕೆರೆಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಸಾವಿಗೀಡಾಗಿರುವ ಘಟನೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಬಳಿಯ ಗ್ರಾಮದಲ್ಲಿ ನಡೆದಿದೆ.
ಮದೀನಾ ಕಾಲೋನಿ ನಿವಾಸಿ, ಮಹಮ್ಮದ್ ತಮೀಮ್ ಬಿನ್ ತಾಹಿರ್ ಹುಸೇನ್ ಎಂಬ ಯುವಕ ಚೌಡೇಶ್ವರಿ ಬೀದಿಯಲ್ಲಿ ಟ್ಯೂಷನ್‌ಗೆ ತೆರಳಿದ್ದನು, ನಂತರ ಸ್ನೇಹಿತರೊಂದಿಗೆ ಬರುವೆ ಗ್ರಾಮದ ದಿಬ್ಬದತ್ತ ಹೊರಟಿದ್ದನು. ಈ ವೇಳೆ ಗದ್ದೆಯೊಳಗಿನ ಕೆರೆಯ ಮೇಲೆ ನಡೆಯುತ್ತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ನೀರಿಗೆ ಬಿದ್ದಿದ್ದಾರೆ ಎನ್ನಲಾಗಿದೆ.
ಸ್ಥಳೀಯರು ಯುವಕನನ್ನು ತಕ್ಷಣ ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದರೂ, ವೈದ್ಯರು ಸ್ಥಳದಲ್ಲಿಯೇ ಯುವಕ ಸಾವನ್ನಪ್ಪಿರುವುದಾಗಿ ದೃಢಪಡಿಸಿದ್ದಾರೆ. ಮೃತ ತಮೀಮ್ ಬಿನ್ ಹುಸೇನ್ ರಾಮಕೃಷ್ಣ ವಿದ್ಯಾಲು ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದನು ಮತ್ತು ಮೂರು ಪಬ್ಲಿಕ್ ಪರೀಕ್ಷೆಗಳನ್ನು ಮುಗಿಸಿದ್ದನು ಎನ್ನಲಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಪ್ರಕರಣ ಸಂಬಂಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭವಾಗಿದೆ.
ಇದನ್ನೂ ಓದಿ : ಜಮೀನಿಗೆ ಹಾಕಿದ್ದ ಉರುಳಿಗೆ ಸಿಲುಕಿ ಹುಲಿ ಸಾವು



















