ಶಿವಮೊಗ್ಗ : ಟೆರೇಸ್ ಮೇಲೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿಯ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ಕೋಟೆ ರಸ್ತೆಯ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನಲ್ಲಿ ನಡೆದಿದೆ. 21 ವರ್ಷದ ಮನೀಷಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ನಗರದ ಖಾಸಗಿ ಕಾಲೇಜಿನಲ್ಲಿ ತೃತೀಯ ಬಿಎಸ್‌ಸಿ ವ್ಯಾಸಂಗ ಮಾಡುತ್ತಿದ್ದ ಮನೀಷಾ, ಬೆಳಗ್ಗೆ 10:15 ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೀಷಾ ಭದ್ರಾವತಿ ತಾಲೂಕಿನ ದೊಡ್ಡೇರಿ ಗಂಗೂರು ಗ್ರಾಮದ ನಿವಾಸಿಯಾಗಿದ್ದು, ಶಿವಮೊಗ್ಗದ ಕೋಟೆ ರಸ್ತೆಯ ಡಾ. ಬಿಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್‌ನಲ್ಲಿ ವಾಸವಾಗಿದ್ದಳು.
ಬೆಳಗ್ಗೆಯ ತಿಂಡಿ ಸೇವಿಸಿದ ನಂತರ ಮನೀಷಾ, ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸದ್ಯ ಮೆಗ್ಗಾನ್ ಆಸ್ಪತ್ರೆಗೆ ವಿದ್ಯಾರ್ಥಿನಿಯ ಶವ ರವಾನಿಸಲಾಗಿದೆ.
ಇದನ್ನೂ ಓದಿ : ಮತದಾರರ ಪಟ್ಟಿ ಬಗ್ಗೆ ಯಾಕೆ ಮೊದಲೇ ಆಕ್ಷೇಪ ಸಲ್ಲಿಸಲಿಲ್ಲ? – ರಾಹುಲ್ ಆರೋಪಕ್ಕೆ ಚುನಾವಣಾ ಆಯೋಗ ತಿರುಗೇಟು!



















