ಕನ್ನಡದ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ (Kamal Haasan) ಹೇಳಿಕೆ ಸಮರ್ಥಿಸಿಕೊಂಡಿದ್ದ ನಟ ಶಿವರಾಜ್ಕುಮಾರ್ (Shivarajkumar) ಈಗ ಮತ್ತೊಮ್ಮೆ ಆ ವಿಷಯದ ಕುರಿತು ಮಾತನಾಡಿದ್ದಾರೆ.
ನಾನು ಕಮಲ್ ಹಾಸನ್ ಹೇಳಿರುವ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವುದಿಲ್ಲ. ನನಗೆ ಅವರು ಆ ಸಂದರ್ಭದಲ್ಲಿ ಏನು ಮಾತನಾಡಿದ್ದಾರೆ ಎಂಬುವುದು ಗೊತ್ತಾಗಿಲ್ಲ. ಕನ್ನಡ ಅಭಿಮಾನದ ಬಗ್ಗೆ ಮಾತನಾಡಿರಬಹುದು ಅಂತಾ ಅಂದುಕೊಂಡಿದ್ದೆ.
ಕನ್ನಡ ಅಭಿಮಾನದ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಕನ್ನಡ ಅಭಿಮಾನ ಏನು ಅನ್ನೋದು ನಮಗೂ ಗೊತ್ತಿದೆ. ನಾನು ಕೂಡ ಕನ್ನಡ ಅಭಿಮಾನೀನೆ. ಅಣ್ಣಾವ್ರ ಕನ್ನಡ ಅಭಿಮಾನ ನಿಮಗೆಲ್ಲರಿಗೂ ಗೊತ್ತೇ ಇದೆ ಎಂದು ಶಿವಣ್ಣ ಹೇಳಿದ್ದಾರೆ.