ನಟ ಶಿವರಾಜಕುಮಾರ್ ಇತ್ತೀಚೆಗಷ್ಟೇ ಮೂತ್ರಕೋಶದ ಕ್ಯಾನ್ಸರ್ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಚಿಕಿತ್ಸೆ ಯಶಸ್ವಿಯಾಗಿದ್ದು, ಅವರು ಕ್ಯಾನ್ಸರ್ ನಿಂದ ಮುಕ್ತರಾಗಿದ್ದಾರೆ ಎನ್ನಲಾಗಿದೆ.
ಇತ್ತೀಚೆಗಷ್ಟೇ ಮೂತ್ರಕೋಶದ ಕ್ಯಾನ್ಸರ್ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಚಿಕಿತ್ಸೆ ಯಶಸ್ವಿಯಾಗಿದ್ದು, ಅವರು ಕ್ಯಾನ್ಸರ್ ನಿಂದ ಮುಕ್ತರಾಗಿದ್ದಾರೆ ಎನ್ನಲಾಗಿದೆ.
ಶಿವಣ್ಣಗೆ ನಡೆದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಹೀಗಾಗಿ ಶಿವಣ್ಣ ಚೇತರಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ವಿಡಿಯೋ ಬಿಡುಗಡೆ ಮಾಡಿರುವ ಶಿವಣ್ಣ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದರು. ಈಗ ಮತ್ತೊಂದು ಫೋಟೋ ವೈರಲ್ ಆಗಿದ್ದು, ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಶಿವಣ್ಣ ಡಿ. 24ರಂದು ಅಮೆರಿಕದ ಫ್ಲೋರಿಡಾದಲ್ಲಿ ಮಿಯಾಮಿ ಕ್ಯಾನ್ಸರ್ ಇನ್ ಸ್ಟಿಟ್ಯೂಟ್ ನಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಈಗ ಶಿವಣ್ಣ ಆಸ್ಪತ್ರೆ ಪಕ್ಕದಲ್ಲಿನ ಹೋಟೆಲ್ ಬಳಿ ಫೋಟೋ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದನ್ನು ಕಂಡು ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.