ಬೆಂಗಳೂರು: ನಟ ಶಿವರಾಜಕುಮಾರ್ ಅಮೆರಿಕದಲ್ಲಿ ಶಸ್ತ್ರ ಚಿಕಿತ್ಸೆ ಮುಗಿಸಿಕೊಂಡು ಮರಳಿ ತಾಯ್ನಾಡಿಗೆ ಬಂದಿದ್ದಾರೆ. ಸದ್ಯ ಅವರು ಸಂಪೂರ್ಣ ಗುಣಮುಖರಾಗಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಹೀಗಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮಾಜಿ ಅಧ್ಯಕ್ಷರು ಶಿವರಾಜಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಇದೇ ಸಮಯದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕ್ಯಾಲೆಂಡರ್ ನ್ನು ಶಿವರಾಜಕುಮಾರ್ ಬಿಡುಗಡೆ ಮಾಡಿದರು.
ಮೂತ್ರಕೋಶದ ಕ್ಯಾನ್ಸರ್ ಸಂಬಂಧ ಆಪರೇಷನ್ ಮಾಡಿಸಿಕೊಳ್ಳಲು ನಟ ಶಿವರಾಜಕುಮಾರ್ ಡಿ.18 ರಂದು ಅಮೆರಿಕಕ್ಕೆ ತೆರಳಿದ್ದರು. ಡಿ.24 ರಂದು ಆಪರೇಷನ್‌ಗೆ ಒಳಗಾಗಿದ್ದು, ಈಗ ಸಂಪೂರ್ಣ ಗುಣಮುಖರಾಗಿ ಮರಳಿದ್ದಾರೆ.