ಅನಾರೋಗ್ಯದ ಹಿನ್ನೆಲೆಯಲ್ಲಿ ನಟ ಶಿವರಾಜ್ ಕುಮಾರ್ ಚಿಕಿತ್ಸೆಗೆಂದು ವಿದೇಶಕ್ಕೆ ತೆರಳುತ್ತಿದ್ದಾರೆ. ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.
‘ಎಲ್ಲರಿಗೂ ಇರುವ ಅನಾರೋಗ್ಯ ಇದೆ. ಆದರೆ, ಎಲ್ಲರೂ ಸ್ವಲ್ಪ ಎಮೋಷನಲ್ ಆಗುತ್ತೇವೆ. ಅದು ಸಹಜ. ತಂಗಿ ಹಾಗೂ ಸಂಬಂಧಿಕರನ್ನೆಲ್ಲ ನೋಡುವಾಗ ಸ್ವಲ್ಪ ಎಮೋಷನಲ್ ಆಯಿತು. ಅಭಿಮಾನಿಗಳು ಕೂಡ ಇದ್ದಾರೆ. ಸ್ವಲ್ಪ ದುಃಖ ಆಗಿದೆಯೇ ಹೊರತು ಬೇರೆ ಏನೂ ಇಲ್ಲ. ‘ನಾನು ಆತ್ಮವಿಶ್ವಾಸದಿಂದ ಇದ್ದೇನೆ.
ಡಿಸೆಂಬರ್ 24ರಂದು ಸರ್ಜರಿ ನಡೆಯುತ್ತದೆ. 35 ದಿನ ಮನೆಯಿಂದ, ಭಾರತದಿಂದ ಹೊರಗೆ ಇರುತ್ತೇನೆ ಎಂಬ ನೋವು ಇದೆ. ಎಲ್ಲರ ಹಾರೈಕೆ ಇದೆ. ಅಭಿಮಾನಿಗಳು, ಮಾಧ್ಯಮದವರು ಕಾಳಜಿ ತೋರಿಸಿದ್ದಾರೆ ಎಂದು ಭಾವುಕರಾಗಿದ್ದಾರೆ.
ಶಸ್ಚ್ರ ಚಿಕಿತ್ಸೆಗೆ ಹೋಗುವುದಕ್ಕೂ ಮುನ್ನ ಶಿವಣ್ಣ ಹೊಸ ಸಿನಿಮಾದ ಅಪ್ಡೇಟ್ ಕೂಡ ನೀಡಿದ್ದಾರೆ. ಆದರೆ ಅನಾರೋಗ್ಯ ಉಂಟಾಗಿರುವುದರಿಂದ ಅವರು ಸದ್ಯಕ್ಕೆ ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿದ್ದಾರೆ. ಶಿವಣ್ಣ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.