ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಪತ್ನಿ ಮೈತ್ರಾದೇವಿ ಅವರ ಸಾವಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ (Shobha Karandlaje) ಪಾತ್ರವಿದೆ ಎಂದು ನನಗೆ ಅನುಮಾನವಿದೆ. ಈ ಕುರಿತು ತನಿಖೆಯಾಗಲಿ ಎಂದು ಸಚಿವ ಭೈರತಿ ಸುರೇಶ್ (Byrathi Suresh) ಹೇಳಿದ್ದು, ಇದಕ್ಕೆ ಸಚಿವೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದಕ್ಕೆ ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದು, ನಾನು ಓಡಿ ಹೋಗುವ ರಾಜಕಾಣಿಯಲ್ಲ. ನಿಮ್ಮನ್ನು ಹೆಬ್ಬಾಳದಿಂದ ಓಡಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೌರವರನ್ನು ಶಕುನಿ ಮುಗಿಸಿದ ಹಾಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಗಿಸಲೆಂದೇ ಭೈರತಿ ಸುರೇಶ್ ಇದ್ದಾರೆ. ಸಿದ್ದರಾಮಯ್ಯ ಪುತ್ರ ರಾಕೇಶ್ ಸಾವಿಗೆ ಭೈರತಿ ಸುರೇಶ್ ಕಾರಣ ಅಂತ ಜನ ಮಾತನಾಡಿಕೊಳ್ಳುತ್ತಿದ್ದಾರೆ. ನಾಲಿಗೆ ಬಿಗಿ ಹಿಡಿದು ಮಾತನಾಡಿ. ಸಿಎಂ ಕುಟುಂಬಕ್ಕೆ ಕಳಂಕ ತಂದವರು ನೀವು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.