ಕನ್ನಡದ ಅಗ್ನಿಸಾಕ್ಷಿ ಸೀರಿಯಲ್ ನಲ್ಲಿ ತನು ಪಾತ್ರದ ಮೂಲಕ ಜನಪ್ರಿಯತೆ ಗಳಿಸಿದ್ದ ನಟಿ ಶೋಭಾ ಶೆಟ್ಟಿ ಕನ್ನಡ ಹಾಗೂ ತೆಲುಗು ಕಿರುತೆರೆಯಲ್ಲಿ ಸಕ್ರಿಯವಾಗಿದ್ದಾರೆ.
ಶೋಭಾ, ತೆಲುಗು ಬಿಗ್ ಬಾಸ್ ಸೀಸನ್ 7ರಲ್ಲಿ ಭಾಗವಹಿಸಿ, ಫೈನಲ್ ಹಂತದಲ್ಲಿ ಎಲಿಮಿನೇಟ್ ಕೂಡ ಆಗಿದ್ದರು. ತೆಲುಗಿನಲ್ಲಿ ‘ಕಾರ್ತಿಕ ದೀಪಂ’ನಲ್ಲಿ ಖಳನಾಯಕಿ ಮೋನಿತಾ ಪಾತ್ರದಲ್ಲಿ ಮಿಂಚಿದ್ದರು. ಅದೇ ಕ್ರೇಜ್ ನೊಂದಿಗೆ, ನಟಿ ಶೋಭಾ ತೆಲುಗು ಬಿಗ್ ಬಾಸ್ ಸೀಸನ್ 7 ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿ ಎಲ್ಲರನ್ನೂ ಅಚ್ಚರಿಗೊಳಿಸಿದರು. ನಂತರ ಕನ್ನಡದ ಬಿಗ್ ಬಾಸ್ ನಲ್ಲೂ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿದ್ದರು.

ಇದೀಗ ಶೋಭಾ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ. ಇಷ್ಟು ದಿನ ಚೆಂದದ ಫೋಟೋಸ್ಗಳನ್ನು ಅಪ್ಲೋಡ್ ಮಾಡುತ್ತಿದ್ದ ಶೋಭಾ, ಈಗ ನಾನು ಕೆಲವು ದಿನಗಳವರೆಗೆ ಸಾಮಾಜಿಕ ಜಾಲತಾಣದಿಂದ ದೂರವಿರುತ್ತೇನೆ’ ಎಂದು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ಅಭಿಮಾನಿಗಳನ್ನು ಅಚ್ಚರಿಗೊಳಿಸಿದ್ದಾರೆ. ಈ ಪೋಸ್ಟ್ ನೋಡಿದ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.