ನವದೆಹಲಿ : ಪೆಟ್ರೋಲ್, ಡೀಸೆಲ್ ದರ ಏರಿಕೆಯಾದ ಬೆನ್ನಲ್ಲೇ ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್(CNG) ಬೆಲೆಯೂ ಏರಿಕೆಯಾಗಿದೆ. ಪ್ರತಿ ಕೆಜಿ ಸಿಎನ್‌ಜಿ ದರವನ್ನು 2 ರೂ. ಏರಿಸಲಾಗಿದ್ದು, ಆಟೋ ಚಾಲಕರಿಗೆ ಶಾಕ್ ಎದುರಾಗಿದೆ.
ಪರಿಷ್ಕೃತ ದರ ಇಂದು ಬೆಳಗ್ಗೆಯಿಂದಲೇ ಜಾರಿಯಾಗಿದೆ. ದರ ಏರಿಕೆಯಿಂದ ಬೆಂಗಳೂರಿನಲ್ಲಿ 1 ಕೆಜಿ ಸಿಎನ್‌ಜಿ ದರ 93 ರೂ.ಗೆ ಏರಿಕೆಯಾಗಿದೆ. ವಿವಿಧ ಭಾಗಗಳಲ್ಲಿ ಅಥವಾ ವಿತರಕರ (ಗ್ಯಾಸ್ ಕಂಪನಿಗಳು) ಆಧಾರದ ಮೇಲೆ ಬೆಲೆಯಲ್ಲಿ 30 ಪೈಸೆಯಿಂದ 1 ರೂ. ರವರೆಗೆ ವ್ಯತ್ಯಾಸ ಇರಲಿದೆ.
ಆಟೋರಿಕ್ಷಾಗಳು, ಕ್ಯಾಬ್‌ಗಳು ವೆಚ್ಚ ಕಡಿಮೆ ಮಾಡಲು ಸಿಎನ್‌ಜಿ ಬಳಸುತ್ತವೆ. ಸಣ್ಣ ಲಾರಿಗಳು, ಟೆಂಪೋಗಳು ಮತ್ತು ಡೆಲಿವರಿ ವ್ಯಾನ್‌ಗಳು ಸಿಎನ್‌ಜಿ ಇಂಧನ ಬಳಸುತ್ತವೆ. ಸಿಎನ್‌ಜಿ ದರ ಏರಿಕೆಯಿಂದ ಈ ವಾಹನಗಳ ಬಾಡಿಗೆ ಏರಿಕೆಯಾಗಲಿದೆ. ಇನ್ನು ದೇಶಾದ್ಯಂತ ಇಂದಿನಿನಿಂದ ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆಯಲ್ಲಿ ಪ್ರತಿ ಲೀಟರ್‌ಗೆ 3 ರೂಪಾಯಿ ಹೆಚ್ಚಳವಾಗಿದೆ.
ಬೆಲೆ ಏರಿಕೆಗೆ ಕಾರಣ ಏನು?
ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಸತತ ಏರಿಳಿತವಾಗುತ್ತಿದೆ. ಪಶ್ಚಿಮ ಏಷ್ಯಾ ಹಾಗೂ ಇರಾನ್ ಸಂಘರ್ಷದಿಂದಾಗಿ ತೈಲ ಸಾಗಣೆಯ ಜಲಮಾರ್ಗಗಳಲ್ಲಿ ವ್ಯತ್ಯಯ ಉಂಟಾಗಿದೆ. ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ಕುಸಿದಿರುವುದರಿಂದ ಆಮದು ವೆಚ್ಚ ಹೆಚ್ಚಾಗಿದ್ದರಿಂದ ದರ ಏರಿಕೆ ಮಾಡಲಾಗಿದೆ.
ಇದನ್ನೂ ಓದಿ : ವೈಭವ್ ಸೂರ್ಯವಂಶಿಗೆ ‘ಇಂಡಿಯಾ-ಎ’ ಬುಲಾವ್ : ತ್ರಿಕೋನ ಸರಣಿಗೆ ತಿಲಕ್ ವರ್ಮಾ ನಾಯಕ!



















