ನಗರಸಭೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಬೀದರ್ನ ನಗರಸಭೆ ಕಮಿಷನರ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಡಿಎಸ್ಪಿ ಹನಮಂತರಾಯ್ ನೇತೃತ್ವದಲ್ಲಿ ದಾಳಿ ನಡೆದಿದೆ.
ನಗರಸಭೆ ಕಮಿಷನರ್ ಶಿವರಾಜ್ ರಾಥೋಡ್ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆದಿದೆ. ಲೋಕಾ ಡಿಎಸ್ಪಿ ಹನುಮಂತರಾಯ್ ಸೇರಿದಂತೆ ನಾಲ್ವರು ಅಧಿಕಾರಿಗಳು ಸಿಬ್ಬಂದಿಗಳಿಂದ ದಾಳಿ ನಡೆದಿದೆ. ಸಾರ್ವಜನಿಕರ ಕೆಲಸಗಳಾಗದಿರುವುದು, ಸಕಾಲದಲ್ಲಿ ಅರ್ಜಿ ವಿಲೇವಾರಿ ಆಗದಿರುವುದು, ಕಡತಗಳ ವಿಲೇವಾರಿ ಸಮರ್ಪಕವಾಗಿ ಆಗದಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜನವಾಡಾ ರಸ್ತೆಯಲ್ಲಿರುವ ಕಮಿಷನರ್ ಕ್ವಾಟರ್ಸ್ ಮೇಲೆಯೂ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.