ಬೆಂಗಳೂರು : ದೇಶದ ಜನ ಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 29 ರೂ. ಹೆಚ್ಚಳ ಮಾಡಲಾಗಿದೆ.
ಕಳೆದ ಮೂರು ತಿಂಗಳಲ್ಲಿ ನಡೆದಿರುವ ಎರಡನೇ ದರ ಏರಿಕೆ ಇದಾಗಿದ್ದು, ಇದಕ್ಕೂ ಮುನ್ನ ಮಾರ್ಚ್ 7ರಂದು ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 60 ರೂ. ಏರಿಕೆ ಮಾಡಲಾಗಿತ್ತು. ಇದೀಗ ಹೊಸ ದರ ಪರಿಷ್ಕರಣೆಯೊಂದಿಗೆ, 14.2 ಕೆಜಿ ತೂಕದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 913 ರೂಪಾಯಿಯಿಂದ 942 ರೂಪಾಯಿಗೆ ಏರಿಕೆಯಾಗಿದೆ.
ಜಾಗತಿಕ ಇಂಧನ ಮಾರುಕಟ್ಟೆಯಲ್ಲಿನ ಏರಿಳಿತ ಮತ್ತು ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ತೈಲ ಕಂಪನಿಗಳು ಬೆಲೆ ಏರಿಕೆ ನಿರ್ಧಾರ ಕೈಗೊಂಡಿದ್ದು, ಇಂದಿನಿಂದಲೇ ಹೊಸ ದರಗಳು ಜಾರಿಗೆ ಬಂದಿವೆ. ಈ ದರ ಪರಿಷ್ಕರಣೆಯು ದೇಶಾದ್ಯಂತ ಅನ್ವಯವಾಗಲಿದ್ದರೂ, ಸ್ಥಳೀಯ ತೆರಿಗೆಗಳು ಮತ್ತು ಸಾರಿಗೆ ವೆಚ್ಚಗಳ ವ್ಯತ್ಯಾಸದಿಂದಾಗಿ ಪ್ರತಿ ನಗರದಲ್ಲೂ ಸಿಲಿಂಡರ್‌ನ ಅಂತಿಮ ಬೆಲೆಯಲ್ಲಿ ವ್ಯತ್ಯಾಸವಿರಲಿದೆ.
ಇದನ್ನೂ ಓದಿ : ವಿಜಯನಗರದಲ್ಲಿ ರಾತ್ರೋರಾತ್ರಿ ಮುಸುಕುಧಾರಿಗಳ ಓಡಾಟ : ಕಳ್ಳತನದ ಸಂಚು ಶಂಕೆ!



















