ಕಾರವಾರ: ವಿದ್ಯುತ್ ಶಾರ್ಟ್ ಸೆರ್ಕ್ಯೂಟ್‌ನಿಂದಾಗಿ ಅಂಗಡಿ, ಮನೆಗಳಿಗೆ ಬೆಂಕಿ ತಗುಲಿರುವ ಘಟನೆ ನಡೆದಿದೆ.
ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ ಉಪ ನೋಂದಣಿ ಕಚೇರಿ ಹತ್ತಿರ ನಡೆದಿದೆ. ಉಪ ನೋಂದಣಿ ಕಚೇರಿ ಬಳಿಯ ರವಿ ಜೆರಾಕ್ಸ್ ಸೆಂಟರ್ ನಲ್ಲಿ ಈ ದುರ್ಘಟನೆ ನಡೆದಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪಕ್ಕದಲ್ಲೇ ಇದ್ದ ಒಂದು ಮನೆ, ಎರಡು ಅಂಗಡಿ ಹಾಗೂ ಒಂದು ಹೋಟೆಲ್‌ಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋಗಿದೆ.
ವಿದ್ಯುತ್ ಅವಘಡದಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ನಾಶವಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಬೆಂಕಿಯ ಕೆನ್ನಾಲಿಗೆ ಹಲವು ವಸ್ತುಗಲು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ದೊಡ್ಡ ಅನಾಹುತ ತಪ್ಪಿಸಿದ್ದಾರೆ. ಈ ಕುರಿತು ಹಳಿಯಾಳ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.