ಬೆಂಗಳೂರು: ಬೆಂಗಳೂರಿಗೆ ಇಂದು ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು ಕೋಲಾರ, ಬೀದರ್, ವಿಜಯಪುರ, ಗದಗ, ಕಲಬುರಗಿ, ಯಾದಗಿರಿ, ರಾಯಚೂರು, ಧಾರವಾಡ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಪ್ಪಳ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಕರಾವಳಿ ಭಾಗದಲ್ಲಿ ಕಳೆದ ಒಂದು ತಿಂಗಳಿಂದ ಬಿಟ್ಟುಬಿಡದೇ ಸುರಿಯುತ್ತಿದ್ದ ಮುಂಗಾರು ಮಳೆ ಆರ್ಭಟ ಇಂದಿನಿಂದ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.