ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಎದುರು ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಮೊಹಮ್ಮದ್ ರಫೀಕ್ ಚೌಧರಿ (Mohammed Rafique Chaudhary) ಬಂಧಿತ ಆರೋಪಿ. ರಾಜಸ್ಥಾನದ ನಾಗೌರ್ ನಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಕೂಡ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ತಂಡದ ಸದಸ್ಯ ಎನ್ನಲಾಗಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಐವರನ್ನು ಬಂಧಿಸಿದಂತಾಗಿದೆ. ಬಂಧಿತ ನಾಲ್ವರ ಪೈಕಿ ಓರ್ವ ವ್ಯಕ್ತಿ ಈಗಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸಲ್ಮಾನ್ ಖಾನ್ (Salman Khan) ಅವರ ಮನೆಮುಂದೆ ಗುಂಡಿನ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿಟ್ಟುಕೊಂಡು ಅವರನ್ನು ವಿಚಾರಣೆ ಮಾಡಲಾಗುತ್ತಿತ್ತು. ಈ ವೇಳೆ ಅನುಜ್ ಥಾಪಸ್ (Anuj Thapas) ಎಂಬ ವ್ಯಕ್ತಿ ಆತ್ಮಹತ್ಯೆ (suicide) ಮಾಡಿಕೊಂಡಿದ್ದಾನೆ. ಹೀಗಾಗಿ ಆತನ ಕುಟುಂಬಸ್ಥರು ಕೋರ್ಟ್ ಮೆಟ್ಟಿಲು ಏರಿದ್ದಾರೆ. ಪೊಲೀಸರ ಹಿಂಸೆಯಿಂದ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.