ಬೆಂಗಳೂರು: ಬಿಜೆಪಿಯ (Karnataka BJP) ಐವರು ನಾಯಕರಿಗೆ ಹೈಕಮಾಂಡ್ ಶೋಕಾಸ್ ನೋಟಿಸ್ ನೀಡಿದೆ. ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ಮೂವರು ಶಾಸಕರಿಗೆ ಹಾಗೂ ಇಬ್ಬರು ಮಾಜಿ ಸಚಿವರಿಗೆನೋಟಿಸ್ (show-cause notice )ನೀಡಿದೆ.
ಪಕ್ಷದ ಆಂತರಿಕ ವಿಚಾರವನ್ನು ಸಾರ್ವಜನಿಕವಾಗಿ ಚರ್ಚಿಸಿದ ಹಿನ್ನೆಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಬಿ.ಪಿ. ಹರೀಶ್ ಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಅಲ್ಲದೇ, ಮಾಜಿ ಸಚಿವ ರೇಣುಕಾಚಾರ್ಯ, ಕಟ್ಟಾ ಸುಬ್ರಹ್ಮಣ್ಯ ನಾಯ್ಡುಗೆ ಶೋಕಾಸ್ ನೋಟಿಸ್ ನೀಡಲಾಗಿದೆ.
ಶಾಸಕ ಬಿ.ಪಿ ಹರೀಶ್ ಅವರು ಯತ್ನಾಳ್ ಬಣದಲ್ಲಿ ಗುರುತಿಸಿಕೊಂಡಿದ್ದರೆ, ಮಾಜಿ ಸಚಿವರಾದ ಎಂ.ಪಿ. ರೇಣುಕಾಚಾರ್ಯ ಹಾಗೂ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿಜಯೇಂದ್ರ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ರೆಬೆಲ್ ಶಾಸಕರಾಗಿದ್ದಾರೆ. 72 ಗಂಟೆಗಳಲ್ಲಿ ಉತ್ತರ ನೀಡುವಂತೆ ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.