ಬೆಂಗಳೂರು: ಸಿಲಿಕಾನ್ ಸಿಟಿಯ ಹಲವೆಡೆ ಮಳೆರಾಯ ವಿಶ್ರಾಂತಿ ನೀಡಿದ್ದರೆ ಹಲವೆಡೆ ಮತ್ತೆ ಅಬ್ಬರಿಸುತ್ತಿದ್ದಾನೆ.
ಕೋರಮಂಗಲ, ಬಿಟಿಎಂ ಲೇಔಟ್, ಜಯನಗರ ಭಾಗದಲ್ಲಿ ತುಂತುರು ಮಳೆಯಾಗುತ್ತಿದೆ. ಬೆಳಗ್ಗೆಯಿಂದಲೂ ತುಂತುರು ಮಳೆ ಶುರುವಾಗಿದೆ. ಇಂದು ಕೂಡ ನಗರದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ತಗ್ಗು ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಅಗ್ನಿಶಾಮಕ ದಳ, ಎಸ್ ಡಿಆರ್ ಎಫ್, ಬಿಬಿಎಂಪಿ ತಂಡಗಳನ್ನು ನಿಯೋಜಿಸಲಾಗಿದೆ. ಸ್ಥಳೀಯರನ್ನು ಸ್ಥಳಾಂತರ ಮಾಡಲು ಪೂರ್ವಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.