ಬೆಂಗಳೂರು : ಕರ್ನಾಟಕದ ವಿಜಯಪುರದಲ್ಲಿರುವ ಶ್ರೀ ಸಿದ್ಧೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ (Shri Shiddeshwar Cooperative Bank Ltd Recruitment 2026) ಆಫ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಂದು ಜನರಲ್ ಮ್ಯಾನೇಜರ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೀವೇನಾದರೂ ವಿಜಯಪುರ ಜಿಲ್ಲೆಯವರಾಗಿದ್ದು, ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದರೆ, ಇದು ಒಳ್ಳೆಯ ಅವಕಾಶವಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಶ್ರೀ ಸಿದ್ಧೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್
ಹುದ್ದೆ ಹೆಸರು: ಜನರಲ್ ಮ್ಯಾನೇಜರ್
ಒಟ್ಟು ಹುದ್ದೆಗಳು: 01
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಫೆಬ್ರವರಿ 25
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸಿಎ, ಡಿಪ್ಲೋಮಾ, ಎಂಬಿಎ ಕೋರ್ಸ್ ಮುಗಿಸಿದವರಿಗೆ ಒಳ್ಳೆಯ ಅವಕಾಶವಾಗಿದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ ಕನಿಷ್ಠ 45ರಿಂದ ಗರಿಷ್ಠ 65 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ shiddeshwarbank.com ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು, ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
Chairman Of NRC Shri. Shiddeshwar Co-Operative Bank Ltd., Administrative Office, Shri. Shiddeshwar Road, Vijayapur-586101 Karnataka
ಇದನ್ನೂ ಓದಿ : ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಫೋಟ | ಮನೆ ಗೋಡೆ ಛಿದ್ರ ಛಿದ್ರ.. ಇಬ್ಬರಿಗೆ ಗಾಯ!



















